Saturday, June 7, 2025

ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು: ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ತಿಳಿಸಿದ್ದಾರೆ.

ಬುಧವಾರ (ಮೇ 10) ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟ ನಡೆದಿದೆ.

ಮೂಡುಶೆಡ್ಡೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮಿಥುನ್ ರೈ ಅವರ ವಾಹನ ಹಾದು ಹೋಗುವ ವೇಳೆ ಪ್ರಧಾನಿ ಮೋದಿ ಪರವಾಗಿ ಘೋಷಣೆ ಕೂಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪರ ಘೋಷಣೆ ಕೂಗಿದ್ದು, ಈ ವೇಳೆ ಘರ್ಷಣೆ ಶುರುವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಘಟನೆಯಲ್ಲಿ ಪೊಲೀಸರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles