ಬೆಂಗಳೂರು: ವೈಯಕ್ತಿಕ ಕೆಲಸಕ್ಕೆ ಸರ್ಕಾರಿ ವಾಹನ ಬಳಕೆ ಹಿನ್ನೆಲೆ ನಟಿ ಹಾಗೂ ರಾಜಕಾರಣಿ ತಾರ ಅವರ ಮೇಲೆ ಎಫ್ಐಆರ್ ದಾಖಲಾಗಿದೆ.
ಈ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಸಿದ್ದರಾಯ ತಾವರೆಕೇಡ್ ಅವರು ತಾರ ಅವರ ವಿರುದ್ಧ ದೂರು ದಾಖಲಿಸಿದ್ದಾರೆ. ಕೆಎ -04 ಎಂ ವಿ 1977 ನಂಬರಿನ ಸರ್ಕಾರಿ ವಾಹನವನ್ನು ಬಳಕೆ ಮಾಡ್ತಿದ್ದಾರೆಂದು ದೂರು ನೀಡಿದ್ದಾರೆ.
ತಾರ ಅವರು ತಮ್ಮ ವೈಯುಕ್ತಿಕ ಕೆಲಸಕ್ಕೆ ಸರ್ಕಾರಿ ಕಾರು ಬಳಕೆ ಮಾಡುತ್ತಿದ್ದಾರೆಂದು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ವಿಡಿಯೋ ಚಿತ್ರೀಕರಣ ಮಾಡಿ ಫ್ಲೈಯಿಂಗ್ ಸ್ಕ್ವಾಡ್ ಗಮನಕ್ಕೆ ತಂದಿದ್ದರು. ಈ ವೇಳೆ ಪರಿಶೀಲನೆ ನಡೆಸಿ ದೂರು ದಾಖಲಿಸಿದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಮೊದಲು ಎನ್ ಸಿ ಆರ್ ದಾಖಲಿಸಿ ನಂತರ ನ್ಯಾಯಾಲಯದ ಅನುಮತಿ ಪಡೆದು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.