ಕೋಲ್ಕತ್ತಾ: ಪೂರ್ವ ಬರ್ದ್ವಾನ್‌ನಲ್ಲಿನ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅವಘಡ ಸಂಭವಿಸಿ ಕೊರೊನಾ ಸೋಂಕಿತ ವ್ಯಕ್ತಿಯೋರ್ವ ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಮೃತರನ್ನು ಬರ್ದ್ವಾನ್ ಜಿಲ್ಲೆಯ ಸಂಧ್ಯಾ ರಾಯ್(60) ಎಂದು ಗುರುತಿಸಲಾಗಿದೆ. ಕೊರೊನಾ ಸೋಂಕಿತರಿದ್ದ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಬೆಂಕಿನಂದಿಸಲು ಮುಂದಾಗಿದ್ದಾರೆ. ಬಳಿಕ ತಕ್ಷಣಕ್ಕೆ ಧಾವಿಸಿ ಬಂದ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಅಷ್ಟರಲ್ಲಾಗಲೇ ಬೆಂಕಿಯ ಕೆನ್ನಾಲಿಗೆ ವಾರ್ಡ್ ಗೆ ಆವರಿಸಿ ಬಿಟ್ಟಿತ್ತು, ಅಗ್ನಿ ಅವಘಢದಿಂದಾಗಿ ಓರ್ವ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.