Sunday, June 8, 2025

ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆಗಳ ಪ್ರತಿ ಡೋಸ್ ಗೆ 275ರೂ. ನಿಗದಿ ಪಡಿಸುವ ಸಾಧ್ಯತೆ

ನವದೆಹಲಿ: ಶೀಘ್ರದಲ್ಲೇ ಭಾರತೀಯ ಔಷಧ ನಿಯಂತ್ರಕರಿಂದ ಸಾಮಾನ್ಯ ಮಾರುಕಟ್ಟೆಗೆ ಅನುಮೋದನೆ ಪಡೆಯುವ ನಿರೀಕ್ಷೆಯಿರುವ ಕೊರೋನಾ ಲಸಿಕೆಗಳಾದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಬೆಲೆಯನ್ನು ಪ್ರತಿ ಡೋಸ್ ಗೆ 275 ರೂ. ಹಾಗೂ ಹೆಚ್ಚುವರಿ ಸೇವಾ ಶುಲ್ಕ 150 ರೂ. ನಿಗದಿ ಮಾಡುವ ಸಾಧ್ಯತೆಗಳಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು (ಎನ್ ಪಿಪಿಎ) ಲಸಿಕೆಗಳನ್ನು ಸಾಮಾನ್ಯ ಜನರ ಕೈಗೆಟಕುವ ಬೆಲೆಗೆ ನಿಗಡಿಪಡಿಸುವಂತೆ ನಿರ್ದೇಶನ ನೀಡಿದೆ ಎಂದು ಹೇಳಿದೆ. ಪ್ರಸ್ತುತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ನ ಪ್ರತಿ ಡೋಸ್ ಗೆ 780 ರೂ ಹಾಗೂ ಕೋವ್ಯಾಕ್ಸಿನ್ ನ ಪ್ರತಿ ಡೊಸ್ ಗೆ 1200 ರೂ ಆಗಿದೆ. ಇದರ ಜೊತೆಗೆ 150 ರೂ ಸೇವಾಶುಲ್ಕವನ್ನೂ ಪಡೆಯಲಾಗುತ್ತಿದೆ.

ಸಾಮಾನ್ಯ ಮಾರುಕಟ್ಟೆಗಳಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳನ್ನು ಒದಗಿಸಲು ಕೇಂದ್ರದ ಔಷಧ ನಿಯಂತ್ರಣ ಮಂಡಳಿಯ ತಜ್ಞರ ಸಮಿತಿಯು ಇತ್ತೀಚೆಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles