Sunday, June 8, 2025

ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಶಾಲೆಗಳು ಸ್ಥಗಿತ

ಮಂಗಳೂರು: ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ನಾಲ್ಕು ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಜಿಲ್ಲೆಯ ಬಂಗ್ರೆ ಕಸಬದ ಸರ್ಕಾರಿ ಪ್ರೌಢಶಾಲೆ, ಡೊಂಗರಕೇರಿಯ ಕೆನರಾ ಸಿಬಿಎಸ್ ಸಿ. ಶಾಲೆ, ಬಜ್ಪೆಯ ಅನ್ಸರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮೂಲ್ಕಿಯ ವ್ಯಾಸ ಮಹರ್ಷಿ ಆಂಗ್ಲ ಮಾಧ್ಯಮಿಕ ಪ್ರೌಢಶಾಲೆಗಳನ್ನು ಮುಚ್ಚಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ  ಡಾ.ಕೆ.ವಿ. ರಾಜೇಂದ್ರ ಅವರು ಈ ಹಿಂದೆ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಆನ್‌ಲೈನ್ ತರಗತಿಗಳನ್ನು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದರ ಹಿನ್ನಲೆಯಲ್ಲಿ ಇದೀಗ ನಾಲ್ಕು ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles