ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿದೆ. ಸಂಜೆ 6.50ರ ಗೋಧೂಳಿ ಲಗ್ನದಲ್ಲಿ ವಿವಾಹ ಕಾರ್ಯವನ್ನು ಹಮ್ಮಿಕೊಂಡಿದ್ದು, ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುತ್ತದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಕೆಕಣ, ಮಂಗಳಸೂತ್ರ, ಹೂವಿನ ಹಾರ ನೀಡಲಾಗುತ್ತದೆ. ಉಚಿತ ಸಾಮೂಹಿಕ ವಿವಾಹದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲು ಇಚ್ಛಿಸುವವರು ಸ-ವಿವರದ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಏಪ್ರಿಲ್ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಉತ್ತಮ ಧ್ಯೇಯೋದ್ದೇಶದೊಂದಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹ ಇದೀಗ 50ನೇ ವರ್ಷಕ್ಕೆ ಕಾಲಿಡುತ್ತಿದೆ. ಇಲ್ಲಿಯವರೆಗೆ 12,393 ಜೋಡಿ ಇಲ್ಲಿ ವಿವಾಹವಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-08256-266644,, ವಾಟ್ಸ್ಆ್ಯಪ್ ಸಂಖ್ಯೆ:8147263422 ಸಂಪರ್ಕಿಸಬಹುದಾಗಿದೆ.