ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ಮಂಗಳವಾರ ನಡೆದಿದೆ.
ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿನಡ್ಕ ನಿವಾಸಿ ಆರಿಫ್ (38) ಎಂದು ಗುರುತಿಸಲಾಗಿದೆ. ಧಕ್ಕೆ ಮೀನು ಮಾರುಕಟ್ಟೆಗೆ ತೆರಳಿ ಬೈಕ್ನಲ್ಲಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ನಾಲ್ವರ ತಂಡ ವಾಹನದಲ್ಲಿ ಬಂದು ಆರಿಫ್ ಮೇಲೆ ಹಲ್ಲೆ ನಡೆಸಿದ್ದಾರೆ.
ಹಳೇ ದ್ವೇಷದಿಂದ ಆರಿಫ್ಗೆ ಹಲ್ಲೆ ನಡೆಸಲಾಗಿದ್ದು, ಗಂಭೀರ ಗಾಯಗೊಂಡ ಆರೀಫ್ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.