ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಸೋಮವಾರ ಟ್ವೀಟ್ ಮೂಲಕ ತಿಳಿಸಿದ್ದಾರೆ.
“ರಾಜ್ಯ ಅರ್ಕಾರಿ ನೌಕರರಿಗೆ ಜನವರಿ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯನ್ನು ಶೇ.2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು” ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಸರ್ಕಾರಿ ನೌಕರರು ಶೇ.5 ರಷ್ಟು ತುಟ್ಟಿಭತ್ಯೆ ಹೆಚ್ಚಿಸಬೇಕು ಎಂದು ಮನವಿ ಮಾಡಿದ್ದರು. ಆದರೆ ಪ್ರಸ್ತುತ ರಾಜ್ಯ ಸರ್ಕಾರ ಶೇ.2.75 ರಷ್ಟು ಹೆಚ್ಚಿಸಿದೆ.