Saturday, June 7, 2025

ರಾಜಧಾನಿಯಲ್ಲಿ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ಪೊಲೀಸರ ವಿರುದ್ಧ ಭ್ರಷ್ಟಾಚಾರ ದೂರುಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠವು ಟ್ರಾಫಿಕ್ ಪೊಲೀಸರು ಬಾಡಿ ಕ್ಯಾಮರಾ ಧರಿಸಬೇಕು ಹಾಗೂ ರಾಜಧಾನಿಯಲ್ಲಿ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕರ್ತವ್ಯದ ವೇಳೆ ಬಾಡಿ ಕ್ಯಾಮರಾ ಧರಿಸಲು ಪೊಲೀಸ್ ಅಧಿಕಾರಿಗಳಿಗೆ ಕರ್ನಾಟಕ ಸರ್ಕಾರವು ಸೂಚಿಸಬೇಕು ಎಂದು ತಿಳಿಸಿದೆ. ಇದನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹಾಗೂ ಖರೀದಿಸಿರುವ ಕ್ಯಾಮರಾ ಬಳಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಹೈಕೋರ್ಟ್ ನಿರ್ದೇಶನದ ಮೇರೆಗೆ ಒಟ್ಟು 2,680 ಬಾಡಿ ಕ್ಯಾಮರಾಗಳನ್ನು ಖರೀದಿಸಲಾಗುತ್ತದೆ. ಇದುವರೆಗೆ 1,097 ಬಾಡಿ ಕ್ಯಾಮರಾ ಖರೀದಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಗೀತಾ ಮಿಶ್ರಾ ಅವರು ಈ ಕುರಿತು ಪಿಐಎಲ್ ಸಲ್ಲಿಸಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles