ಬೆಂಗಳೂರು: ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗುಸಹಿತಉತ್ತಮ ಮಳೆಯಾಗಲಿದೆ.ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.