ಉಡುಪಿ : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆದ ಬಾಲಕಿಯರಿಗೆ ನುರಿತ ಮಹಿಳಾ ತರಬೇತುದಾರರ ಮೂಲಕ ಸ್ವಯಂ ರಕ್ಷಣಾ ಕೌಶಲ್ಯಗಳನ್ನು ಹೇಳಿಕೊಡಲಾಗುತ್ತದೆ. ಕರಾಟೆ, ಜುಡೋ, ಟೈಕ್ವಾಂಡೋ ಇತ್ಯಾದಿ ಸ್ವಯಂ ರಕ್ಷಣಾ ಕೌಶಲ್ಯಗಳನ್ನು 6 ತಿಂಗಳುಗಳ ಕಾಲ ತರಬೇತಿ ನೀಡಲಾಗುತ್ತದೆ. ಈ ತರಬೇತಿಯನ್ನು ನೀಡಲು ಅಂತರಾಷ್ಟ್ರೀಯ ಮಾನ್ಯತೆ ಹೊಂದಿದ ಮಾರ್ಷಲ್ ಆರ್ಟ್ಸ್ ಗಳಲ್ಲಿ ಕನಿಷ್ಠ ಬ್ಲಾಕ್ ಬೆಲ್ಟ್ ಪೂರ್ಣಗೊಳಿಸಿರುವ ಅಭ್ಯರ್ಥಿಳನ್ನು ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಜನವರಿ 1 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ [email protected] ಸಂಪರ್ಕಿಸಿ. ಅಥವಾ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ. ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾಟೆ, ಜುಡೋ, ಟೈಕ್ವಾಂಡೋ ಪರಿಣತರಿಗೆ ಇಲ್ಲಿದೆ ಸದಾವಕಾಶ
Subscribe
Login
0 Comments