Saturday, July 26, 2025

ಹಿಜಾಬ್ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್ ತ್ರಿ ಸದಸ್ಯ ಪೀಠ

ಬೆಂಗಳೂರು: ರಾಜ್ಯದಾದ್ಯಂತ ಸುದ್ದಿಮಾಡಿದ್ದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ತ್ರಿ ಸದಸ್ಯ ಪೀಠ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಅವರ ಸುದೀರ್ಘ ವಾದ ಮಂಡನೆ ಕೇಳಿದ ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಮೊಹಿದ್ದೀನ್ ನೇತೃತ್ವದ ತ್ರಿಸದಸ್ಯ ಪೀಠ, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಹಿಜಾಬ್ ವಿಷಯಗಳಿಗೆ ಸಂಬಂಧಿದ ಸುದೀರ್ಘ ವಾದ ಪ್ರತಿವಾದಗಳು ಮಂಡನೆಯಾಗುವ ಸಾಧ್ಯತೆ ಇರುವುದರಿಂದ ಹೈಕೋರ್ಟ್ ತ್ರಿ ಸದಸ್ಯ ಪೀಠ ಅರ್ಜಿ ವಿಚಾರಣೆ ನಾಳೆ ಮಧ್ಯಾಹ್ನಕ್ಕೆ ಮುಂದೂಡಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles