ಬೆಂಗಳೂರು: ಪ್ರತಿ ಜಿಲ್ಲೆಯಲ್ಲಿ ಗೋ ಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಅಲ್ಲದೇ ಪ್ರತಿ ಗ್ರಾಮಮಟ್ಟದಲ್ಲೂ ಗೋ ಶಾಲೆ ತೆರೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೌಖಿಕವಾಗಿ ಹೇಳಿದೆ.
ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ನಿರ್ದೇಶಿಸಬೇಕು ಎಂದು ಸಲ್ಲಿಸಿರುವ ಪಿಎಲ್ಐ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪ್ರತಿ ಜಿಲ್ಲೆಯಲ್ಲಿ ಗೋ ಶಾಲೆ ಆರಂಭಿಸಿದರೆ ಸಾಕಾಗುವುದಿಲ್ಲ, ಪ್ರತಿ ಗ್ರಾಮದಲ್ಲೂ ಗೋಶಾಲೆಯನ್ನು ಆರಂಭಿಸುವ ಅಗತ್ಯವಿದೆ. ಬೇರೆ ರಾಜ್ಯಗಳಿಗೆ ಹೋಗಿ ಪರಿಶೀಲನೆ ಮಾಡಿ, ಅಲ್ಲಿನ ಸರ್ಕಾರ ಪ್ರತಿಯೊಂದು ಗ್ರಾಮದಲ್ಲಿ ಗೋಶಾಲೆ ಆರಂಭಿಸಿವೆ ಎಂದರು. ಬಳಿಕ ಮುಂದಿನ ವಿಚಾರಣೆ ವೇಳೆ ರಾಜ್ಯದಲ್ಲಿ ಗೋ ಶಾಲೆ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ಯಾವ ಮಾರ್ಗಸೂಚಿ ರಚನೆ ಮಾಡಲಾಗಿದೆ ಎನ್ನುವ ಬಗ್ಗೆ ಮಾಹಿತಿ ನೀಡಬೇಕು ಎಂದು ಸರ್ಕಾರಕ್ಕೆ ಮೌಖಿಕವಾಗಿ ಸೂಚಿಸಿದ ಸಿಜೆ, ವಿಚಾರಣೆಯನ್ನು ಎರಡು ವಾರ ಮುಂದೂಡಿದರು.