ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜು ಪ್ರವೇಶ ಅನುಮತಿ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿ ವಿಚಾರಣೆ ರಾಜ್ಯ ಹೈಕೋರ್ಟ್ ನಲ್ಲಿ ಸೋಮವಾರ ಮಧ್ಯಾಹ್ನ 2:30ಕ್ಕೆ ಪುನರಾರಂಭಗೊಳ್ಳಲಿದೆ.
ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ವಿಭಾಗೀಯ ಪೀಠ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಸರ್ಕಾರದ ಪರವಾಗಿ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಲಿದ್ದಾರೆ. ಹಿಜಾಬ್ ವಿವಾದ ವಿಚಾರವಾಗಿ ಅಂತಿಮ ತೀರ್ಪು ಬರುವ ತನಕ ಧಾರ್ಮಿಕ ಗುರುತುಗಳನ್ನು ಸೂಚಿಸುವ ಉಡುಪು ಧರಿಸಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.