Sunday, June 8, 2025

ಉಡುಪಿ ಎಂಜಿಎಂ ಕಾಲೇಜಿನಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಹಿಜಾಬ್ ಕೇಸರಿ ವಿವಾದ

ಉಡುಪಿ: ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ಹಿಜಾಬ್ ಕೇಸರಿ ಶಾಲು ವಿವಾದದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಮಂಗಳವಾರ ಹಿಜಾಬ್ ಕೇಸರಿ ಶಾಲು ವಿವಾದ ದೊಡ್ಡ ಹೈಡ್ರಾಮಾವನ್ನೇ ಸೃಷ್ಟಿಸಿದ್ದು, ಕಾಲೇಜು ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.


ಇಂದು ಎಂಜಿಎಂ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೊಟ್ಟು ಕಾಲೇಜಿಗೆ ಬಂದ ಹಿನ್ನೆಲೆ ಅವರಿಗೆ ಕಾಲೇಜು ಆವರಣ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಈ ವೇಳೆ ವಿದ್ಯಾರ್ಥಿನಿಯರು ಒಳಗೆ ಬಿಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಸಂದರ್ಭ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಜೈ ಶ್ರೀ ರಾಮ್ ಘೊಷಣೆ ಕೂಗಿದ್ದಾರೆ. ಇನ್ನೊಂದೆಡೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು ವಿ ವಾಂಟ್ ಜಸ್ಟೀಸ್ ಎಂದು ಘೊಷಣೆ ಕೂಗುತ್ತಿದ್ದಾರೆ. ಪರಿಸ್ಥಿತಿಯನ್ನು ತಿಳಿಗೊಳಿಸಲು ಕಾಲೇಜು ಸಿಬ್ಬಂದಿ ವರ್ಗ ಹರಸಾಹಸ ಪಡುತ್ತಿದ್ದು, ಪೊಲೀಸ್ ಮತ್ತು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles