ಮಂಗಳೂರು: ಹಿಜಾಬ್ ವಿಚಾರವಾಗಿ ಸಂಘರ್ಷ ನಡೆದ ಹಿನ್ನಲೆ ಮಂಗಳೂರಿನ ರಥಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ಘೋಷಿಸಿ, ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕಾಲೇಜಿಗೆ ರಜೆ ಘೋಷಿಸಿ, ಕಾಲೇಜಿನಲ್ಲಿ ನಡೆಯುತ್ತಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡುವಂತೆ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.
ಶುಕ್ರವಾರ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಬಂದ ವಿದ್ಯಾರ್ಥಿನಿಯರು ಹಾಗೂ ಕೆಲ ವಿದ್ಯಾರ್ಥಿಗಳ ನಡುವೆ ಪರಸ್ಪರ ಸಂಘರ್ಷ ಉಂಟಾಗಿತ್ತು. ಈ ಹಿನ್ನಲೆ ಇಂದು ಕಾಲೇಜಿಗೆ ರಜೆ ಘೋಷಿಸಲಾಗಿದೆ.