ಬೆಂಗಳೂರು: ರಾಜ್ಯದ ಶಾಲಾ-ಕಾಲೇಜಿಗಳಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 8ರಂದು ಹೈ ಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.
ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಸಲ್ಲಿಸಿರುವ ಮನವಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಇಂದು ವಿಚಾರಣೆ ನಡೆಸಲಿದೆ.
ರಾಜ್ಯ ಸರ್ಕಾರ ಎಲ್ಲ ಶಾಲಾ ಕಾಲೇಜಗಳಲ್ಲಿ ಸಮವಸ್ತ್ರ ಸಂಹಿತೆ ಕುರಿತಂತೆ ಸುತ್ತೋಲೆ ಹೊರಡಿಸಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪಾಠ ಕೇಳಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದೆ.