ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.
ಮುಖ್ಯನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ಪೀಠ ಮೌಖಿಕವಾಗಿ ಇಂದು ಹಿಜಾಬ್ ವಿವಾದಕ್ಕೆ ಕುರಿತಂತೆ ಅರ್ಜಿ ವಿಚಾರಣೆ ನಡೆಸುವುದಾಗಿ ಶುಕ್ರವಾರ ಆದೇಶ ಹೊರಡಿಸಿತ್ತು. ಇದರಂತೆ ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು ಅರ್ಜಿ ಪರ ಹಾಗೂ ವಿರೋಧ ವಕೀಲರು ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ವಾದ ಮಂಡಿಸಿದ್ದಾರೆ. ವಾದ ವಿವಾದವನ್ನು ಆಲಿಸಿದ ನ್ಯಾಯಪೀಠ ನಾಳೆ ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದೆ.