Sunday, June 8, 2025

ಹಿಜಾಬ್ ಕೇಸರಿ ವಿವಾದ: ಮುಂಜಾಗ್ರತಾ ಕ್ರಮವಾಗಿ ಗಂಗೊಳ್ಳಿಯಲ್ಲಿ ಪೊಲೀಸ್ ಪಥಸಂಚಲನ

ಕುಂದಾಪುರ: ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಗ್ರಾಮದ ಮೇಲ್ ಗಂಗೊಳ್ಳಿ, ಜಾಮಿಯಾ ಮೊಹಲ್ಲಾ, ಸುಲ್ತಾನ್ ಮೊಹಲ್ಲಾ, ಚರ್ಚ್ ರೋಡ್, ಎಸ್. ವಿ ಕಾಲೇಜು ರಸ್ತೆ, ಬಂದರು ರಸ್ತೆಯಲ್ಲಿ ಜನ ಜಾಗ್ರತಿ ಮೂಡಿಸುವ ಸಲುವಾಗಿ ಪೊಲೀಸ್ ಪಥಸಂಚಲನ ನಡೆಸಿದರು.

ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ ಗಂಗೊಳ್ಳಿ ಪಿಎಸ್ಐ ನಂಜಾ ನಾಯ್ಕ್, ಕೊಲ್ಲೂರು ಠಾಣೆ ಪಿಎಸ್ಐ ಹೀರಣ್ಣ ಶಿರಗುಂಟೆ, ಟ್ರಾಫಿಕ್ ಠಾಣೆ ಪಿಎಸ್ಐ ಸುಧಾಪ್ರಭು, ಬೈಂದೂರು ಠಾಣೆ ಪಿಎಸ್ಐ ಪವನ್ ನಾಯ್ಕ್ ಸೇರಿದಂತೆ ಪೊಲೀಸ್ ಸಹಾಯಕ ಉಪನಿರೀಕ್ಷಕರುಗಳು, ಸಿಬ್ಬಂದಿಗಳು, ಕೆ.ಎಸ್.ಆರ್.ಪಿ ಮಹಿಳಾ ವಿಭಾಗದ ಪೊಲೀಸರು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles