ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸುವ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಸೋಮವಾರ ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ವಿದ್ಯಾರ್ಥಿಗಳು ಕೇವಲ ಸಮವಸ್ತ್ರ ಧರಿಸಿ ಬರಬೇಕೆಂದು ನ್ಯಾಯಾಲಯ ಸ್ಪಷ್ಟ ಸೂಚನೆ ನೀಡಿದೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅಥವಾ ಶಾಲು ಯಾವುದೇ ಧಾರ್ಮಿಕ ಗುರುತುಗಳನ್ನು ವಿಚಾರಣೆ ಮುಗಿಯುವವರೆಗೆ ಹಾಕುವಂತಿಲ್ಲ ಎಂದು ಹೈಕೋರ್ಟ್ ನ ತ್ರಿಸದಸ್ಯ ಪೀಠ ಮೌಖಿಕವಾಗಿ ತಿಳಿಸಿದೆ.