ದಕ್ಷಿಣ ಕನ್ನಡ: ರಾಜ್ಯಾದ್ಯಂತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾರಂಭವಾದ ಹಿಜಾಬ್ ವಿವಾದದ ಪ್ರಕರಣದ ತೀರ್ಪನ್ನು ಹೈಕೋರ್ಟ್ ಮಂಗಳವಾರ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಬಾಹ್ಯ ಪರೀಕ್ಷೆಗಳು ನಿಗದಿ ಪಡಿಸಿದಂತೆ ನಡೆಯಲಿದ್ದು, ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.