Sunday, June 8, 2025

ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಒಂದೇ ದಿನ 40ಸಾವಿರ ಪಾಸಿಟಿವ್ ಕೇಸ್ ಪತ್ತೆ, 21ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿನ ಕುರಿತು ಜನರು ಬಹಳ ಎಚ್ಚರಿಕೆಯನ್ನು ವಹಿಸುವುದು ಅನಿವಾರ್ಯವಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 40,499 ಕೊರೊನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, ಸೋಂಕಿನಿಂದಾಗಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಸಚಿವ ಡಾ.ಸುಧಾಕರ್ ಟ್ವೀಟ್ ಮಾಡುವ ಮುಖಾಂತರ ಮಾಹಿತಿಯನ್ನು ನೀಡಿದ್ದಾರೆ.


ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 24,135 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಸೋಂಕಿನ ಕಾರಣಕ್ಕೆ 5 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ರಾಜ್ಯದಲ್ಲಿ ಕೊರೊನಾ ವೈರಸ್‌ನ ಪಾಸಿಟಿವಿಟಿ ದರ ಶೇ.18.80 ರಷ್ಟಿದ್ದು, 23,209 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಕರ್ನಾಟಕದಲ್ಲಿ 2,67,650 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles