ಉಡುಪಿ: ಉಡುಪಿಯಲ್ಲಿ ಕಳೆದ 24 ಗಂಟೆಗಳಲ್ಲಿ 175ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಇಬ್ಬರು ಕೊರೊನಾ ಸೋಮಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಒಂದೇ ದಿನ 378 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 92200ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ 94,681 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟರೆ, ಈವರೆಗೆ 524 ಮಂದಿಗೆ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1,957 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.