ಉಡುಪಿ: ಉಡುಪಿಯಲ್ಲಿ ಕಳೆದ 24 ಗಂಟೆಗಳಲ್ಲಿ 201ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, 467 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಈವರೆಗೆ 94,304ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, 91,362 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 2,422 ಸಕ್ರಿಯ ಪ್ರಕರಣಗಳಿವೆ.