ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಪ್ರಕರಣಗಳು 50 ಸಾವಿರದ ಗಡಿ ಸಮೀಪಿಸಿದೆ. 47,754 ಜನರಲ್ಲಿ ಇಂದು ಕೊರೋನಾ ಸೋಂಕು ಪತ್ತೆಯಾಗಿದ್ದು, 29 ಜನರು ಸಾವನ್ನಪ್ಪಿದ್ದಾರೆ. 22,143 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 2,93,231 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 30,540 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹಾಗೂ 8 ಜನರು ಸಾವನ್ನಪ್ಪಿದ್ದಾರೆ. ಇಲ್ಲಿ ಶೇಕಡ 63 ರಷ್ಟು ಜನರು ಮನೆಯಲ್ಲಿ ಪ್ರತ್ಯೇಕವಾಗಿದ್ದು ಕೊರೋನಾದಿಂದ ಗುಣಮುಖರಾಗುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.