Saturday, June 7, 2025

ದೇಶದ ಒಟ್ಟು ಕೋವಿಡ್ ಸಕ್ರಿಯ ಪ್ರಕರಣದಲ್ಲಿ ಶೇ.77 ರಷ್ಟು 10 ರಾಜ್ಯದಲ್ಲಿದೆ: ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ದೇಶದಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇಕಡ 77 ರಷ್ಟು ಕೋವಿಡ್ ಪ್ರಕರಣಗಳನ್ನು 10 ರಾಜ್ಯಗಳು ವರದಿ ಮಾಡಿವೆ. ಕೋವಿಡ್ ಲಸಿಕೆಯಿಂದ ಜನರು ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಹಾಗೂ ಸೋಂಕಿನ ತೀವ್ರತೆ ಕಡಿಮೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕರ್ನಾಟಕ, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ 3 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಆಂಧ್ರಪ್ರದೇಶ, ಗುಜರಾತ್ ಹಾಗೂ ತಮಿಳುನಾಡಿನಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಜನವರಿ 26ರ ಮಾಹಿತಿಯ ಅನುಸಾರ 551 ಜಿಲ್ಲೆಗಳು ಶೇಕಡ 5ಕ್ಕಿಂತ ಹೆಚ್ಚು ಪ್ರಕರಣಗಳ ಪಾಸಿಟಿವ್ ವರದಿ ಮಾಡುತ್ತಿವೆ. ಕಳೆದ ವಾರ ದೇಶದಾದ್ಯಂತ ಒಟ್ಟು ಪ್ರಕರಣಗಳ ಪಾಸಿಟಿವಿಟಿ ದರವು ಸುಮಾರು ಶೇಕಡ 17.75 ಆಗಿತ್ತು. 11 ರಾಜ್ಯಗಳಲ್ಲಿ 50,000 ಕ್ಕೂ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳಿವೆ, 14 ರಾಜ್ಯಗಳಲ್ಲಿ 10,000-50,000 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಹಾಗೂ 11 ರಾಜ್ಯಗಳಲ್ಲಿ 10,000 ಕ್ಕಿಂತಲೂ ಕಡಿಮೆ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles