ಕಾರ್ಕಳ: ಕಾರ್ಕಳ ಉತ್ಸವದ ಪ್ರಯುಕ್ತ ಅರಣ್ಯ ಪ್ರಾತ್ಯಕ್ಷಿಕೆ ಹಾಗೂ ವಸ್ತುಪ್ರದರ್ಶನ ಮಳಿಗೆ ಹಾಗೂ ಮಾರಾಟ ಮಳಿಗೆ ಉದ್ಘಾಟನಾ ಕಾರ್ಯಕ್ರಮವು ಸೋಮವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇಂಧನ ಹಾಗೂ ಕನ್ನಡ ಮತ್ತು ಸಂಸರತಿ ಇಲಾಖೆ ಸಚಿವ ಸುನಿಲ್ ಕುಮಾರ್, ಕಾದಿ ಮೇಳ, ಶಿಲ್ಪ ಕಲೆ, ಲಲಿತಾ ಕಲೆ ಸೇರಿದಂತೆ ವಿವಿಧ ಪ್ರದರ್ಶನ ಹಾಗೂ ಮಾರಾಟ ಮಳಿಗೆ ತೆರೆಯಲಾಗಿದೆ. ಮಾರ್ಚ್ 17ರಂದು ಫಲಪುಷ್ಪ ಪ್ರದರ್ಶನ ಇಲ್ಲಿ ನಡೆಯಲಿದೆ ಎಂದರು.
ಈ ಸಂದರ್ಭ ಬೆಂಗಳೂರು ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷ ಡಿ.ಮಹೇಂದ್ರ, ಬೆಂಗಳೂರು ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ವೀರಣ್ಣ ಅಕ್ಕಸಾಲಿ, ದಾವಣಗೆರೆ ರಂಗಾಯಣದ ನಿರ್ದೇಶಕ ಯಶವಂತ ಸರದೇಶ ಪಾಂಡೆ, ಉಡುಪಿ ಕೆನರಾ ಬ್ಯಾಂಕ್‌ನ ಕೇಂದ್ರೀಯ ಮುಖ್ಯಸ್ಥ ಎಸ್.ಕೆ.ಕಾಲಿ, ಕುಂದಾಪುರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಖಾರಿ ಆಶೀಶ್ ಶೆಟ್ಟಿ, ಕುದುರೆಮುಖ ವನ್ಯಜೀವಿ ಉಪಸಂರಕ್ಷಣಾಧಿಕಾರಿ ರುದ್ರನ್ ಐಎಫ್, ಬೆಂಗಳೂರು ಕರ್ನಾಟಕ ಕರಕುಶಲ ನಿಗಮದ ನಿರ್ದೇಶಕಿ ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹ ನಿರ್ದೇಶಕಿ ಪೂರ್ಣಿಮಾ ಮೊದಲಾದವರು ಉಪಸ್ಥಿತರಿದ್ದರು.
ಕರುಣಾಕರ ಕೋಟ್ಯಾನ್ ನಿರೂಪಿಸಿ, ರೇಷ್ಮಾ ಶೆಟ್ಟಿ ಪ್ರಸ್ತಾವನೆ ಸಲ್ಲಿಸಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ವಂದಿಸಿದರು.


