ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಪ್ರತಿನಿತ್ಯ ಏರಿಳಿತ ಉಂಟಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,85,914ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4,00,85,116 ಏರಿಕೆಯಾಗಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 665 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಆ ಮೂಲಕ ಸೋಂಕಿನಿಂದ ಸಾವ್ನಪ್ಪಿರುವವರ ಸಂಖ್ಯೆ 4,91,154 ಕ್ಕೆ ಏರಿಕೆಯಾಗಿದೆ. ಇನ್ನು, ದೇಶದಲ್ಲಿ ಒಂದೇ ದಿನ 2,99,073 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 3,73,70,971ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 22,23,018 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್ ಶೇ.16.16 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2.85ಲಕ್ಷ ಮಂದಿಗೆ ಕೊರೊನಾ ಸೋಂಕು ದೃಢ:665 ಮಂದಿ ಸಾವು
Subscribe
Login
0 Comments