ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ದಾಖಲೆಯ ಮಟ್ಟದಲ್ಲಿ ಇಳಿಕೆಯನ್ನು ಕಾಣುತ್ತಿರುವುದು ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಗಳಲ್ಲಿ 67,597ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, 1,188ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,80,456 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸದ್ಯ 9,94,891 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ 4,23,39,611 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟರೆ, 4,08,40,658 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು, ದೇಶದಲ್ಲಿ ಈವರೆಗೆ 5,04,078 ಮಂದಿ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ದೈನಂದಿನ ಪಾಸಿಟಿವಿಟಿ ರೇಟ್ ಶೇ.5.02ರಷ್ಟಿದೆ.