ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬಂದಿದ್ದು, ಕಳೆದ 24 ಗಂಟೆಗಳಲ್ಲಿ 2,55,874 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆ ಮೂಲಕ ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿಗೆ ತುತ್ತಾಗಿರುವವರ ಸಂಖ್ಯೆ 3,97,99,202 ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್‌ನಲ್ಲಿ ಮಾಹಿತಿಯನ್ನು ನೀಡಿದೆ.
ಕೊರೊನಾ ವೈರಸ್ ಸೋಂಕಿಗೆ ಕಳೆದ 24 ಗಂಟೆಗಳಲ್ಲಿ 614 ಮಂದಿ ಸಾವನ್ನಪ್ಪಿದ್ದು, ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 4,90,462 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ನಿನ್ನೆ ಪತ್ತೆಯಾಗಿರುವ ಕೊರೊನಾ ಪ್ರಕರಣಗಳಿಗೆ ಹೋಲಿಸಿದರೆ ಇಂದು 50,190 ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿದೆ. ಇನ್ನು, ಕಳೆದ 24 ಗಂಟೆಗಳಲ್ಲಿ 2,67,753 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 3,70,71,898 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 22,36,842 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.15.52 ರಷ್ಟಿದೆ.