Thursday, June 19, 2025

ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ

ಉಡುಪಿ: ಕಜಕಿಸ್ತಾನದಲ್ಲಿ ನಡೆದ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ. ದೇಶವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ.
ಉಡುಪಿಯ ಅಕ್ಷತಾ ಪೂಜಾರಿ ಬೋಳ ಪವರ್ ಲಿಫ್ಟಿಂಗ್ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹಲವು ಚಿನ್ನದ ಪದಕ ಗೆದ್ದಿದ್ದಾರೆ. ಕಳೆದ ಬಾರಿಯ ಏಕಲವ್ಯ ಪ್ರಶಸ್ತಿ ಸಹ ಪಡೆದುಕೊಂಡಿದ್ದಾರೆ. ಈ ವರ್ಷ ಕಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‌ನಲ್ಲಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.
ಅಕ್ಷತಾ ಅವರು ರಾಜ್ಯ ಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 5 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿಗೆ ಭಾಜನರಾಗಿದ್ದರು. ರಾಷ್ಟ್ರಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 4 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿ ಗೆದ್ದಿದ್ದಾರೆ. ಏಷ್ಯಾ ಮಟ್ಟದಲ್ಲೂ 4 ಬಾರಿ ಚಿನ್ನ, ಕಾಮನ್ ವೆಲ್ತ್ ಕೂಟದಲ್ಲಿ 8 ಚಿನ್ನ, ವಿಶ್ವ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest


0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles