Sunday, June 8, 2025

ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗರಾಗಿ ಭಾರತದ ಸ್ಮೃತಿ ಮಂಧಾನ ಆಯ್ಕೆ

ದುಬೈ: ಸ್ಮೃತಿ ಮಂಧಾನ ಅವರು ಭಾರತ ಮಹಿಳಾ ಕ್ರಿಕೆಟ್ ತಂಡದ ಓಪನರ್. ಇವರು 2021 ರ ಐಸಿಸಿ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸ್ಮೃತಿ ಮಂಧಾನ ಅವರು ಈ ವರ್ಷ ಐಸಿಸಿ ವಾರ್ಷಿಕ ಪ್ರಶಸ್ತಿ ಪಡೆದ ಭಾರತೀಯ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2021 ರಲ್ಲಿ 22ರ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 38.86 ರ ಸರಾಸರಿಯಲ್ಲಿ ಒಂದು ಶತಕ ಹಾಗೂ 5 ಅರ್ಧ ಶತಕಗಳ ಮೂಲಕ 55 ರನ್ ಗಳಿಸಿದ್ದರು. ಆದ್ದರಿಂದಲೇ ಸ್ಮೃತಿ ಮಂಧಾನ ಅವರು ರಚೇಲ್ ಹೇಹೋ ಫ್ಲಿಂಟ್ ಟ್ರೋಫಿಯನ್ನು ತಮ್ಮದಾಗಿಸಿಕೊಳ್ಳಲು ಸಾಧ್ಯವಾಗಿದೆ. 2018 ರಲ್ಲೂ ಸ್ಮೃತಿ ಮಂಧಾನ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದರು. ಇದೀಗ ಎರಡನೇ ಬಾರಿಗೆ ಸ್ಮೃತಿ ಮಂಧಾನ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles