Sunday, June 8, 2025

ಪ್ರೇಮಿಗಳ ದಿನದ ಪ್ರಯುಕ್ತ ಚೊಚ್ಚಲ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ ಇನ್ಫಿನಿಕ್ಸ್‌

ಪ್ರೇಮಿಗಳ ದಿನದ ಅಂಗವಾಗಿ ಇನ್ಫಿನಿಕ್ಸ್‌ ಕಂಪನಿ ತನ್ನ ಹೊಸ ಇನ್ಫಿನಿಕ್ಸ್‌ ಜಿರೋ 5ಜಿ ಹೊಸ ಸ್ಮಾರ್ಟ್​​ಫೋನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಮಾಡಿದೆ.

ಇನ್ಫಿನಿಕ್ಸ್‌ ಜಿರೋ 5G ಸ್ಮಾರ್ಟ್‌ಫೋನ್‌ 1080 x 2460 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಅನ್ನು, 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೂ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ನಲ್ಲಿ ಫೆ.18ರಿಂದ ಇನ್ಫಿನಿಕ್ಸ್‌ ಜಿರೋ 5ಜಿ ಸ್ಮಾರ್ಟ್​​ಫೋನ್ ಖರೀದಿಗೆ ಅಭ್ಯವಿದೆ. ಇದು ಇನ್ಫಿನಿಕ್ಸ್‌ ಕಂಪನಿಯ ಚೊಚ್ಚಲ 5G ಸ್ಮಾರ್ಟ್‌ಫೋನ್‌ ಆಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಕಡಿಮೆ ಬೆಲೆಯ 5ಜಿ ಫೋನ್​ಗಳ ಜೊತೆ ನೇರವಾಗಿ ಸ್ಪರ್ಧೆಗಿಳಿಯಲಿದೆ. ಈ ಸ್ಮಾರ್ಟ್​​ಫೋನ್ ಗೆ 19,999 ರೂ. ನಿಗದಿ ಮಾಡಲಾಗಿದ್ದು, ಪ್ರೇಮಿಗಳಿಗೆ ಉಡುಗೊರೆ ನೀಡಬೇಕೆನ್ನುವವರಿಗೆ ಈ ಸ್ಮಾರ್ಟ್​​ಫೋನ್ ಉತ್ತಮ ಆಯ್ಕೆಯಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles