Sunday, June 8, 2025

11 ವರ್ಷದವರೆಗಿನ ಮಕ್ಕಳು ಮಾಸ್ಕ್ ಧರಿಸುವುದು ಕಡ್ಡಾಯವಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರವು ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ ದೇಹದಲ್ಲಿ ಪ್ರತಿಕಾಯ ಸೃಷ್ಟಿಗೆ ಸಹಾಯವಾಗುವ ಆಯಂಟಿಬಾಡಿ ಔಷಧಗಳನ್ನು ನೀಡಬಾರದು ಎಂದು ತಿಳಿಸಿದೆ.

ಕೇಂದ್ರ ಸರ್ಕಾರವು ಮಕ್ಕಳು ಹಾಗೂ ಅಪ್ರಾಪ್ತರಿಗೆ ಸಂಬಂಧಿಸಿದಂತೆ ಕೋವಿಡ್ ನಿರ್ವಹಣೆ ಕುರಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯ ಅನುಸಾರ ಸ್ಟಿರಾಯ್ಡ್ ಬಳಸುವುದಾದಲ್ಲಿ ಅದು ಕೇವಲ 10-14 ದಿನಗಳಿಗೆ ಸೀಮಿತವಾಗಿರಬೇಕು. 12 ಕ್ಕಿಂತ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 6-11 ವರ್ಷದ ಮಕ್ಕಳು ಮಾಸ್ಕ್‌ ಧರಿಸುವುದು ಆ ಮಕ್ಕಳ ಪೋಷಕರಿಗೆ ಬಿಟ್ಟಿದ್ದು. 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ತಿಳಿಸಿದೆ.

ಕೊರೋನ ಹಾಗೂ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ತಜ್ಞರ ಸಮಿತಿಯು ಕೋವಿಡ್ ಮಾರ್ಗಸೂಚಿಯನ್ನು ಪರಿಷ್ಕರಿಸಿತು. ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಒಮಿಕ್ರಾನ್ ಸೋಂಕಿನ ಪರಿಣಾಮ, ತೀವ್ರತೆ ಕಡಿಮೆ ಇದೆ. ಆದರೂ ಎಚ್ಚರ ವಹಿಸುವುದು ಅಗತ್ಯ ಎಂದು ತಿಳಿಸಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles