ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ಮಾ.17ರಂದು ಬಿಡುಗಡೆಯಾಗಿದ್ದು, ಬಿಡುಗಡೆಯಾದ ಮೊದಲ ದಿನವೇ 30ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಮೂಲಕ ಯಶ್ ನಟನೆಯ ಕೆಜಿಎಫ್ ಚಾಪ್ಟರ್ 1 ಸಿನಿಮಾದ ದಾಖಲೆಯನ್ನೂ ಮುರಿದು ಹಾಕಿದೆ.
ಕರ್ನಾಟಕ ಮಾತ್ರವಲ್ಲದೇ ದೇಶ-ವಿದೇಶದಲ್ಲೂ ಜೇಮ್ಸ್ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಇದಾಗಿದ್ದು, ಸಿನಿಮಾ ನೋಡಿದ ಪ್ರೇಕ್ಷಕರೆಲ್ಲರೂ ಭಾವುಕರಾಗಿದ್ದಾರೆ. ಸಿನಿಮಾದ ಮೊದಲ ದಿನದ ಟಿಕೆಟ್ ನಾಲ್ಕು ದಿನದ ಮೊದಲೇ ಸೋಲ್ಡ್ ಔಟ್ ಆಗಿತ್ತು. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಜೇಮ್ಸ್, ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಲಿದೆ.