ನವದೆಹಲಿ: ಪೂರ್ವ ಕರಾವಳಿ ರೈಲ್ವೆಯ ಖಾಲಿ ಇರುವ 8 ಫಾರ್ಮಾಸಿಸ್ಟ್ ನರ್ಸಿಂಗ್ ಸೂಪರಿಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತು ಪೂರ್ವ ಕರಾವಳಿ ರೈಲ್ವೆ ಅಧಿಸೂಚನೆ ಹೊರಡಿಸಿದ್ದು, ಖಾಲಿ ಇರುವ ಹುದ್ದೆಗಳಿಗೆ ಜನವರಿ ೨೦ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಆಪ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜನವರಿ 31 ಕೊನೆಯ ದಿನಾಂಕವಾಗಿದ್ದು, ಪೂರ್ವ ಕರಾವಳಿ ರೈಲ್ವೆಯ ಅಧಿಕೃತ ವೆಬ್‌ಸೈಟ್ http://eastcoastrail.indianrailways.gov.in ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ದ್ವಿತೀಯ ಪಿಯುಸಿ, ಬಿ. ಫಾರ್ಮ್, ಡಿ. ಫಾರ್ಮ್, ಬಿಎಸ್ಸಿ ನರ್ಸಿಂಗ್, ಜಿಎನ್‌ಎಮ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿಯನ್ನು 20-40ವರ್ಷಕ್ಕೆ ನಿಗದಿಪಡಿಸಲಾಗಿದೆ. ಅಧಿಸೂಚನೆಯ ನಿಯಮದ ಪ್ರಕಾರ ಫಾರ್ಮಾಸಿಸ್ಟ್ ನರ್ಸಿಂಗ್ ಸೂಪರಿಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಡಿಶಾದ ಭುವನೇಶ್ವರದಲ್ಲಿ ಉದ್ಯೋಗವನ್ನು ನೀಡಲಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮುಖಾಂತರ ಆಯ್ಕೆ ಪ್ರಕಿಯನ್ನು ನಡೆಸಲಾಗುತ್ತದೆ.