ಬೆಂಗಳೂರು: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 4 ರಂದು ವಿವಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವಂತೆ ವಿಶ್ವವಿದ್ಯಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಲ್ಯಾಬ್ ಅಸಿಸ್ಟೆಂಟ್, ಲೈಬ್ರರಿ ಅಸಿಸ್ಟಂಟ್, ಎ/ಸಿ ಮೆಕ್ಯಾನಿಕ್ ಮತ್ತು ಪ್ಲಂಬರ್‌ನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕನಿಷ್ಠ 18 ವರ್ಷ ತುಂಬಿದ ಗರಿಷ್ಠ 38 ವರ್ಷ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಲ್ಯಾಬ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬಿಎಸ್ಸಿ ಪದವಿಯನ್ನು ಪಡೆದಿರಬೇಕು. ಲೈಬ್ರರಿ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿ, ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಎ/ಸಿ ಮೆಕ್ಯಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿಯನ್ನು ಪಾಸಾಗಿರಬೇಕು. ಪ್ಲಂಬರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್ ಪಾಸ್ ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಈ ಕುರಿತು ಇನ್ನಷ್ಟು ಮಾಹಿತಿಯನ್ನು ಪಡೆದುಕೊಳ್ಳ ಬಯಸುವವರು mangloreuniversity.ac.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಿಂಡಿಕೆಟ್ ಹಾಲ್, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಯಲಿದೆ.