ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿ ಇದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಕಲ್ಲಡ್ಕ ಅವರು ಚೇತರಿಸಿಕೊಳ್ಳುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
ಕಲ್ಲಡ್ಕ ಅವರ ಆರೋಗ್ಯ ಸ್ಥಿರವಾಗಿದ್ದು, ಗಾಳಿ ಸುದ್ದಿಗೆ ಕಿವಿಗೊಡಬೇಡಿ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
Subscribe
Login
0 Comments