ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಬದಿಯ ತಗ್ಗುಪ್ರದೇಶಕ್ಕೆ ಉರುಳಿಬಿದ್ದ ಘಟನೆ ಹೆಬ್ರಿ ತಾಲೂಕಿನ ವರಂಗ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ.
ಕಾರು ತೀರ್ಥಹಳ್ಳಿಯಿಂದ ಮಂಗಳೂರಿನ ಕಡೆಗೆ ಸಾಗುತ್ತಿದ್ದು, ವರಂಗದ ಕೆಲ್ ಟೆಕ್ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗುಪ್ರದೇಶಕ್ಕೆ ಕಾರು ಉರುಳಿಬಿದ್ದಿದೆ. ಇದರಿಂದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವರಂಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದನ್ನು ಲೆಕ್ಕಿಸದೆ ಚಾಲಕ ಅಜಾರೂಕತೆಯಿಂದ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.