ಹಾವೇರಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧದಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್(22) ಎಂದು ತಿಳಿದುಬಂದಿದೆ. ಖಾರ್ಕಿವ್‌ನ ಬೆಕೆಟೋವಾ ನಗರದಲ್ಲಿ ಇಂದು ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ನವೀನ್ ಮೃತಪಟ್ಟಿದ್ದಾರೆ.
ಉಕ್ರೇನ್‌ನ ನ್ಯಾಷನಲ್ ಮೆಡಿಕಲ್ ವಿ.ವಿ.ಯಲ್ಲಿ ನವೀನ್ ನಾಲ್ಕನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದರು. ಅವರು ಇಂದು ಅಗತ್ಯ ವಸ್ತುಗಳನ್ನು ತರಲು ಸೂಪರ್ ಮಾರ್ಕೆಟ್‌ಗೆ ತೆರಳಿದ್ದರು. ಈ ವೇಳೆ ಉಕ್ರೇನ್-ರಷ್ಯಾ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಲೈನಿನಲ್ಲಿ ನಿಂತಿದ್ದ ನವೀನ್‌ಗೆ ಗುಂಡು ತಗುಲಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿದೇಶಾಂಗ ಇಲಾಖೆ ನವೀನ್ ಸಾವನ್ನಪ್ಪಿರುವುದನ್ನು ಖಚಿತ ಪಡಿಸಿದೆ.