ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಪಾಸಿಟಿವ್‌ನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಕರ್ನಾಟದಲ್ಲಿ 42,470 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 34,67,472ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನ ಲ್ಲಿ ಮಾಹಿತಿಯನ್ನು ನೀಡಿದೆ.
ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 26 ಮಂದಿ ಕೊರೊನಾ ಸೋಂಕಿನಿ0ದಾಗಿ ಮೃತಪಟ್ಟಿದ್ದು, ಆ ಮೂಲಕ ಸೋಂಕಿನಿ0ದ ಸಾವನ್ನಪ್ಪಿದವರ ಸಂಖ್ಯೆ 38,563ಕ್ಕೆ ಏರಿಕೆಯಾಗಿದೆ. ಇನ್ನು, ಒಂದೇ ದಿನ 35,140ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿ0ದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 30,98,432ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 3,30,447 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.