Sunday, June 8, 2025

ಕರ್ನಾಟಕದಲ್ಲಿ ಒಂದೇ ದಿನ 20,505ಪಾಸಿಟಿವ್ ಕೇಸ್‌ ಪತ್ತೆ:81 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೊನಾ ಪಾಸಿಟಿವ್ ಪ್ರಮಾಣ ಕಡಿಮೆಯಾಗುತ್ತಿದ್ದರೂ ಕೂಡ ಇನ್ನೊಂದೆಡೆ ಸೋಂಕಿನಿಂದಾಗಿ ಸಾಯುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 24ಗಂಟೆಗಳಲ್ಲಿ 20,505ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಂದೇ ದಿನ 81ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಈವರೆಗೆ 38,44,338 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, 39,137 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 40,903ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 36,27,925ಕ್ಕೆ ಏರಿಕೆಯಾಗಿದೆ. ಸದ್ಯ ಕರ್ನಾಟಕದಲ್ಲಿ 1,77,244 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ರೇಟ್ ಶೇ.12.55ರಷ್ಟಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles