Saturday, June 7, 2025

2021-22 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ರಿಪೀಟರ್ಸ್‌ ಸೇರಿದಂತೆ ಒಟ್ಟು 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ. 85.63 ಫಲಿತಾಂಶ ದಾಖಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿಸಿ ನಾಗೇಶ್, ಈ ಬಾರಿ 3,58,602 ವಿದ್ಯಾರ್ಥಿಗಳು, 3,72,279 ವಿದ್ಯಾರ್ಥಿನಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ.81.30 ವಿದ್ಯಾರ್ಥಿಗಳು ಹಾಗೂ ಶೇ. 90.29 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625ಕ್ಕೆ 625, 309 ವಿದ್ಯಾರ್ಥಿಗಳು 625ಕ್ಕೆ 624 ಹಾಗೂ 472 ವಿದ್ಯಾರ್ಥಿಗಳು 625ಕ್ಕೆ 623 ಅಂಕ ಪಡೆದಿದ್ದಾರೆ ಎಂದರು.

ಪ್ರತಿ ವರ್ಷದಂತೆ ಈ ವರ್ಷವೂ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಕಳೆದ 10 ವರ್ಷಗಳಲ್ಲಿ ಈ ಬಾರಿ ಹೆಚ್ಚು ಫಲಿತಾಂಶ ದಾಖಲಾಗಿದೆ. ಇನ್ನು 32 ಜಿಲ್ಲೆಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎ ಗ್ರೇಡ್ ಪಡೆದಿದ್ದು, ಜೂನ್ 20 ರಿಂದ ಜುಲೈ 4ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದೆ ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles