ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಲಸಿಕಾಕರಣವನ್ನು ಚುರುಕುಗೊಳಿಸಿತ್ತು. ಇದೀಗ ಕರ್ನಾಟಕವು ರಾಜ್ಯದ ಶೇ.99.99 ರಷ್ಟು ಜನರಿಗೆ ಮೊದಲ ಡೋಸ್ ನೀಡುವ ಮೂಲಕ ಹೊಸ ದಾಖಲೆ ಮಾಡಿದೆ.
ಈ ದಾಖಲೆಯ ಕುರಿತು ಆರೋಗ್ಯ ಸಚಿವ ಮತ್ತು ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.ಲಸಿಕಾಕರಣದಲ್ಲಿ ರಾಜ್ಯ ಸರ್ಕಾರ ಹೊಸ ದಾಖಲೆ ಮಾಡಿದ್ದು, ಶೇ.99.9ರಷ್ಟು ಜನರಿಗೆ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದೆ. ಶೇ.0.1ರಷ್ಟು ಜನರಿಗೆ ಲಸಿಕೆ ನೀಡುವುದು ಉಳಿದಿದೆ. ಉಳಿದವರಿಗೂ ಲಸಿಕೆ ನೀಡಿದರೆ ಕರ್ನಾಟಕ ಶೇ.100ರಷ್ಟು ಮೊದಲ ಡೋಸ್ ಲಸಿಕೆ ನೀಡಿದ ರಾಜ್ಯ ಎಂಬ ಪಟ್ಟಿಯನ್ನು ಸೇರಲಿದೆ ಎಂದು ತಿಳಿಸಿದ್ದಾರೆ.