ಪ್ಯಾರಿಸ್: ಅರ್ಜೆಂಟೀನಾ ಫುಟ್‌ಬಾಲ್ ತಂಡದ ನಾಯಕ ಲಯೊನೆಲ್ ಮೆಸ್ಸಿ, ಪ್ರತಿಷ್ಠಿತ ಲಾರೆನ್ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ.ಫುಟ್‌ಬಾಲ್ ವಿಶ್ವಕಪ್ ವಿಜೇತ ನಾಯಕ ಮೆಸ್ಸಿ, ಅರ್ಜೆಂಟೀನಾದ ಪರವಾಗಿ ಲಾರೆಸ್ ವರ್ಷದ ವಿಶ್ವ ತಂಡ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಮೂಲಕ ಒಂದೇ ಸಾಲಿನಲ್ಲಿ ಲಾರೆಸ್ ವರ್ಷದ ಕ್ರೀಡಾಪಟು ಹಾಗೂ ವರ್ಷದ ತಂಡ ಪ್ರಶಸ್ತಿ ಗೆದ್ದ ಮೊತ್ತ ಮೊದಲ ಕ್ರೀಡಾಪಟು ಎನಿಸಿದ್ದಾರೆ.ಇದರೊಂದಿಗೆ ಮೆಸ್ಸಿ, ಎರಡನೇ ಬಾರಿಗೆ ಲಾರೆಸ್ ವರ್ಷದ ಕ್ರೀಡಾಪಟು ಗೆದ್ದ ಸಾಧನೆ ಮಾಡಿದ್ದಾರೆ. ಈ ಹಿಂದೆ 2020ರಲ್ಲಿ ದಿಗ್ಗಜ ಫಾರ್ಮುಲಾ ಒನ್ ಚಾಲಕ ಲೂಯಿಸ್ ಹ್ಯಾಮಿಲ್ಟನ್ ಜೊತೆ ಪ್ರತಿಷ್ಠಿತ ಪ್ರಶಸ್ತಿ ಹಂಚಿಕೊಂಡಿದ್ದರು.