ಮಲಯಾಳಂ ಚಿತ್ರರಂಗದ ಖ್ಯಾತ ನಟ ಮಾಮುಕೋಯ ಮೃತಪಟ್ಟಿದ್ದಾರೆ. ನಾಲ್ಕು ದಶಕಗಳ ಕಾಲ ಮಲಯಾಳಂ ಚಿತ್ರರಂಗವನ್ನು ಆಳಿದ ನಟ ಮಾಮುಕೋಯ ನಿಧನರಾಗಿದ್ದಾರೆ.
ಅವರಿಗೆ 76 ವರ್ಷ ವಯಸ್ಸಾಗಿತ್ತು. ಹೃದಯಾಘಾತದ ಜೊತೆಗೆ ಮೆದುಳಿನ ರಕ್ತಸ್ರಾವ ಆಗಿರುವುದು ಸಾವಿಗೆ ಕಾರಣ ಎಂದು ಹೇಳಲಾಗಿದೆ. ಮಲಪ್ಪುರಂನ ಕಾಳಿಕಾವಿಲ್‌ನಲ್ಲಿ ನಡೆದ ಫುಟ್‌ಬಾಲ್ ಪಂದ್ಯಾವಳಿಯ ಉದ್ಘಾಟನೆಗೆ ಬರುವಾಗ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರದಿಂದ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯಾಹ್ನ 1 ಗಂಟೆಗೆ ಅವರು ಮೃತಪಟ್ಟಿದ್ದಾರೆ.