ಉಪ್ಪಿನಂಗಡಿ: ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೇತುವೆಯಿಂದ ನದಿಗೆ ಧುಮುಕಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಗುರುವಾರ ನಡೆದಿದೆ.
ಮೃತರನ್ನು ಗದಗ ಮೂಲದ ರೋಣ ಮನೆ ನಿವಾಸಿ ಭರಮಪ್ಪ (31) ಎಂದು ಗುರುತಿಲಾಗಿದೆ. ಈ ಬಗ್ಗೆ ಭರಮಪ್ಪನ ಪತ್ನಿ ಗೀತಾ ಪೊಲೀಸರಿಗೆ ದೂರು ನೀಡಿದ್ದು, ವಿಪರೀತ ಮದ್ಯವ್ಯಸನಿಯಾಗಿದ್ದ ಈತ, ಕೂಲಿ ಕೆಲಸಕ್ಕೆಂದು ಹೋದವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿಸಿದ್ದಾರೆ.
ಭರಮಪ್ಪ ತನ್ನ ಕುಟುಂಬ ಸಮೇತ ತೆಕ್ಕಾರು ಗ್ರಾಮದ ಸರಳೀಕಟ್ಟೆಯ ಮೂಡಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸ್ಥಳೀಯ ನಿವಾಸಿಯೋರ್ವರ ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.