Sunday, June 8, 2025

ಡಿವೈಡರ್ ಮೇಲೆ ಹತ್ತಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು; ಸವಾರೆ ಗಂಭೀರ

ಮಂಗಳೂರು: ಅತಿವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಡಿವೈಡರ್ ಮೇಲಕ್ಕೆ ಹಾರಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಬಲ್ಲಾಳ್‌ಬಾಗ್‌ನಲ್ಲಿ ಶನಿವಾರ ನಡೆದಿದೆ.

ಬಿಎಂಡಬ್ಲ್ಯು ಕಾರು ಚಾಲಕ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದ್ದು, ಅಪಘಾತದ ವೇಳೆ ಡಿವೈಡರ್ ಮೇಲೆ ನಿಂತಿದ್ದ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳದಲ್ಲಿದ್ದ ಜನರು ಬಿಎಂಡಬ್ಲ್ಯು ಕಾರು ಚಾಲಕನಿಗೆ ಥಳಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಾರು ಚಾಲಕನನ್ನು ಬರ್ಕೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles