Thursday, June 19, 2025

ಮಂಗಳೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಮಂಗಳೂರು: ನಗರದ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ.
ಕೇರಳ ಮೂಲದ ಈಡುಕ್ಕಿ ಜಿಲ್ಲೆಯ ನಿವಾಸಿ ಪ್ರಸ್ತುತ ನಗರದ ಮೆಡಿಕಲ್ ಕಾಲೇಜು ವಿದ್ಯಾರ್ಥಿಯಾಗಿರುವ ರೋಸನ್ ಜೋಸ್(21) ಮೃತಪಟ್ಟವರು. ಸೋಮವಾರ ರಾತ್ರಿ ಊಟ ಮಾಡಿ ಕಾಲೇಜು ಹಾಸ್ಟೆಲ್ ರೂಮಿನಲ್ಲಿ ರೋಶನ್ ಮಲಗಿದ್ದರು ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಆತನ ತಂದೆ ಕರೆ ಮಾಡಿದ್ದಾಗ ಕರೆ ಸ್ವೀಕರಿಸಿಲ್ಲ. ಇದರಿಂದ ಗಾಬರಿಗೊಂಡ ತಂದೆ ರೂಮ್ ಪಕ್ಕದಲ್ಲಿರುವ ಮತ್ತೊಬ್ಬ ವಿದ್ಯಾರ್ಥಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಉಳಿದ ವಿದ್ಯಾರ್ಥಿಗಳು ಸೇರಿ ರೂಮು ಬಾಗಿಲು ಬಡಿದಾಗ ಯಾವುದೇ ಸ್ಪಂದನೆ ಸಿಗಲಿಲ್ಲ. ತಕ್ಷಣ ಹಾಸ್ಟೆಲ್ ಸಿಬ್ಬಂದಿಯ ಗಮನಕ್ಕೆ ತಂದು ಬಾಗಿಲು ಒಡೆದು ನೋಡಿದಾಗ ಮಲಗಿದ ಸ್ಥಿತಿಯಲ್ಲೇ ಬಿದ್ದುಕೊಂಡಿದ್ದು, ಆತನನ್ನು ತಪಾಸಣೆ ನಡೆಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ.
ವಿಷಯ ತಿಳಿದ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಈ ಸಂಬAಧ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles