Saturday, June 21, 2025

ಮೇ. 10ರ ಬಳಿಕ ಎಸ್ಎಸ್ಎಲ್’ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಮೇ.10ರ ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಎಸ್ಎಸ್ಎಲ್’ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಮೌಲ್ಯಮಾಪನದ ನಂತರದ ಕಾರ್ಯ ಪ್ರಗತಿಯಲ್ಲಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿಯ ಮೂಲಗಳು ತಿಳಿಸಿವೆ.

ವಿಧಾನಸಭಾ ಚುನಾವಣೆ ಹಿನ್ನೆಲೆ ಶಾಲೆಗಳನ್ನು ಮತಗಟ್ಟೆಗಳಾಗಿ ಗುರುತಿಸಿರುವುದರಿಂದ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆಡಳಿತ ಮಂಡಳಿ ಕಾಯಬೇಕಾಗಿದೆ. ಹೀಗಾಗಿ ಫಲಿತಾಂಶ ಸಿದ್ಧವಾಗಿದ್ದರೂ ಮತದಾನ ಪೂರ್ಣಗೊಳ್ಳುವವರೆಗೆ ಕಾಯಬೇಕಿದೆ.ಈ ನಡುವೆ ಚುನಾವಣೆ ಪೂರ್ಣಗೊಂಡ ಬಳಿಕ ಮೇ.11 ಅಥವಾ 12 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

Editorial Staff
Editorial Staff
ರಾಜ್ಯದ ವಾಸ್ತವಿಕ ಸಂಗತಿಗಳನ್ನು,ವಿಶೇಷ ಕುತೂಹಲಕಾರಿ ಮಾಹಿತಿ,ಲೇಖನಗಳನ್ನು ಲೋಕಕ್ಕೆ ನೀಡುವುದೇ ನಮ್ಮ ಉದ್ದೇಶ. ನೇರ,ನಿಷ್ಪಕ್ಷಪಾತ ಪತ್ರಿಕೋದ್ಯಮವೇ ನಮ್ಮ ಆದ್ಯತೆ.
0 0 votes
Article Rating
Subscribe
Notify of
guest


0 Comments
Inline Feedbacks
View all comments

Stay Connected

2,500FansLike
1,333FollowersFollow
3,000SubscribersSubscribe

Latest Articles